ಬೆಂಗಳೂರು : ರಾಜಧಾನಿ ಬೆಂಗಳೂರಿನ ಪ್ರಮುಖ ಪ್ರದೇಶಗಳಲ್ಲೇ ನಾಳೆ, ನಾಡಿದ್ದು ವಿದ್ಯುತ್ ವ್ಯತ್ಯಯ ಆಗಲಿದೆ. ಆದ್ದರಿಂದ ಜನಸಾಮಾನ್ಯರು ಸಹಕರಿಸಬೇಕು ಎಂದು ಬೆಸ್ಕಾಂ ಮನವಿ ಮಾಡಿದೆ.
ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (BESCOM) ವ್ಯಾಪ್ತಿಯಲ್ಲಿ ಕೆಪಿಟಿಸಿಲ್ ತುರ್ತು ನಿರ್ವಹಣೆ ಮತ್ತು ಇತರ ಕಾಮಗಾರಿಗಳನ್ನು ಹಮ್ಮಿಕೊಂಡಿದೆ.
ಆದ್ದರಿಂದ ವಿವಿಧ ಪ್ರದೇಶಗಳಲ್ಲಿ ಫೆಬ್ರವರಿ 11 ಹಾಗೂ 12 ರಂದು ಪವರ್ ಕಟ್ ಇರಲಿದೆ ಎಂದು ಬೆಸ್ಕಾಂ ಪ್ರಕಟಣೆ ಹೊರಡಿಸಿದೆ.
‘ಕೆಪಿಟಿಸಿಎಲ್ ನಿಂದ ಹೆಬ್ಬಾಳ ವಿಭಾಗದ 66/11 ಕೆವಿಎ ಸಹಕಾರನಗರ ಕೇಂದ್ರದಲ್ಲಿ ಸಬ್‌ಸ್ಟೇಷನ್ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 11.02.2026 (ಬುಧವಾರ) ರಂದು ಬೆಳಗ್ಗೆ 11:00 ಯಿಂದ ಮಧ್ಯಾಹ್ನ 15:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ’ ಎಂದು ಬೆಸ್ಕಾಂ ತಿಳಿಸಿದೆ.
ಚಿತ್ರದುರ್ಗ ಜಿಲ್ಲೆಯ ತಳಕು ಬೆಸ್ಕಾಂ ಉಪ ವಿಭಾಗದ ‘ತಳಕು 66/11’ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಫೆಬ್ರವರಿ 11ರ ಬುಧವಾರ ಕೆಪಿಟಿಸಿಎಲ್ ವತಿಯಿಂದ 4ನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿದೆ.
ಯಾವ್ಯಾವ ಪ್ರದೇಶದಲ್ಲಿ ಕರೆಂಟ್ ಕಟ್
- ಬೇಡರಡ್ಡಿ-ಹಳ್ಳಿ
- ತಿಮ್ಮಪ್ಪಯನಹಳ್ಳಿ
- ಎನ್.ದೇವರಹಳ್ಳಿ
- ತಳಕು
- ಮೊನ್ನೆಕೋಟೆ
- ದೇವರೆಡ್ಡಿಹಳ್ಳಿ
- ಹಿರೇಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಬೆಳಿಗ್ಗೆ 10ರಿಂದ ಸಂಜೆ 5 ಗಂಟೆಯವರೆಗೂ ನಿರಂತರ ಜ್ಯೋತಿ, ಕೃಷಿ ಬಳಕೆಯ ವಿದ್ಯುತ್ ಪೂರೈಕೆ ಸ್ಥಗಿತವಾಗಲಿದೆ.
ಹೆಬ್ಬಾಳದಲ್ಲೂ ಕರೆಂಟ್ ಕಟ್
ಬೆಂಗಳೂರಿನ ಪ್ರಮುಖ ಪ್ರದೇಶವಾದ ಹೆಬ್ಬಾಳದಲ್ಲಿ ನಾಳೆ ವಿದ್ಯುತ್ ವ್ಯತ್ಯಯ ಆಗಲಿದೆ. ಬೆಳಗ್ಗೆ 11 ರಿಂದ ಮಧ್ಯಾಹ್ನ 3 ರವರೆಗೆ ವಿದ್ಯುತ್ ಕಟ್ ಆಗಲಿದೆ.
ಹೆಬ್ಬಾಳ ವಿಭಾಗದ 66/11 ಕೆವಿ ಯಲಹಂಕ ಉಪಕೇಂದ್ರದಲ್ಲಿ ಇಂದು ಸಂಜೆ 06:00 ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
ಯಾವೆಲ್ಲಾ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ?
ಎ ಬ್ಲಾಕ್, ಇ ಬ್ಲಾಕ್, ಬಳ್ಳಾರಿ ಮುಖ್ಯ ರಸ್ತೆ, ಜಿ ಬ್ಲಾಕ್, ಎಫ್ ಬ್ಲಾಕ್, ತಲಕಾವೇರಿ ಲೇಔಟ್, ಅಮೃತಹಳ್ಳಿ, ಬಿಜಿಎಸ್ ಲೇಔಟ್, ನವ್ಯ ನಗರ ಬ್ಲಾಕ್, ಶಬರಿ ನಗರ, ಬೈತರಾಯನಪುರ ಜಕ್ಕೂರು ಬಡಾವಣೆ, ಜಿಕೆವಿಕೆ ಲೇಔಟ್, ಜಕ್ಕೂರು ಪ್ಲಾಂಟೇಶನ್, ಯೋಷಾದ ನಗರಾಮೃತಹಳ್ಳಿ, ಡಿ, ಅಮೃತಹಳ್ಳಿ ಬಿ ಬ್ಲಾಕ್, ಸಿ ಬ್ಲಾಕ್, ಸಿಕ್ಯುಎಎಲ್ ಲೇಯೋಟ್, ಡಿ ಬ್ಲಾಕ್, ಇ ಬ್ಲಾಕ್, ಸಂಪಿಗೆಹಳ್ಳಿ, ಅಗ್ರಹಾರ ಗ್ರಾಮ, ಜಯಸರ‍್ಯ ಲೇಔಟ್, ವಿಧಾನಸೌಧ ಲೇಔಟ್ ಸಾಯಿಬಾಬಾ ಲೇಔಟ್, ಟೆಲಿಕಾಂ ಲೇಔಟ್, ಎಂಸಿಇಸಿಎಚ್‌ಎಸ್ ಲೇಔಟ್, ಎಂಸಿಇಸಿಎಚ್‌ಎಸ್ ಲೇಔಟ್, ಎಂಸಿ ಪಿಎಚ್‌ಎಸ್ ಲೇಔಟ್, ಸೂರ್ಯೋದಯ ನಗರ. 2 , ಅಗ್ರಹಾರ ಲೇಔಟ್, ಕೋಗಿಲು ಲೇಔಟ್, ಶ್ರೀನಿವಾಸಪುರ ಜಕ್ಕೂರು, ವಿಆರ್‌ಎಲ್ ರಸ್ತೆ (ಸಂತೆ ರಸ್ತೆ), ಐಎಎಸ್ ರಸ್ತೆ, ಅರ್ಕಾವತಿ ಲೇಔಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಕಡಿತ ಆಗಲಿದೆ.
Thank you for updates